H.C. Venugopal HC
H.C. Venugopal Editor Environmentalist
H.C. Venugopal HC
H.C. Venugopal Editor Environmentalist

ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ

:

Font size:

ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ

ಬೆಂಗಳೂರು ನಗರದಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಒಂದು ಕಡೆ ಜೆಸಿಬಿಗಳು ಘರ್ಜನೆ ನಡೆಸುತ್ತಿದ್ದರೆ, ಮತ್ತೊಂದು ಕಡೆ ಒತ್ತುವರಿಗೆ ಸಹಾಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ರಾಜ ಕಾಲುವೆ ಒತ್ತುವರಿ ಸಂಬಂಧ 20 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒಪ್ಪಿಗೆ ನೀಡಲಾಗಿದೆ. ಇವರಲ್ಲಿ 13 ಮಂದಿ ಹಾಲಿ ಮತ್ತು 7 ಮಂದಿ ನಿವೃತ್ತ ಅಧಿಕಾರಿಗಳು ಸೇರಿದ್ದಾರೆ. ಹಾಲಿ ಅಧಿಕಾರಿಗಳನ್ನು ಅಮಾನತು ಮಾಡಲು ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.[ರಾಜ ಕಾಲುವೆ ಒತ್ತುವರಿ ತೆರವು ಸಮರ್ಥಿಸಿಕೊಂಡ ಸಿದ್ದರಾಮಯ್ಯ]

ನಗರದಲ್ಲಿ ರಾಜ ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ ಮನೆಗಳನ್ನು ತೆರವು ಮಾಡಲಾಗುತ್ತಿದೆ. ಅಕ್ರಮವಾಗಿ ಮನೆ, ಕಟ್ಟಡ ನಿರ್ಮಾಣ ಮಾಡಲು ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.[ಒತ್ತುವರಿ ತೆರವಿನಲ್ಲೂ ಪ್ರಭಾವದ ಒಳಸುಳಿ]

ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಸಹಕರಿಸಿದ ಆರೋಪ ಅಧಿಕಾರಿಗಳ ಮೇಲಿದೆ. ಜೊತೆಗೆ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳಿಗೆ ಈ ಅಧಿಕಾರಿಗಳು ನಕ್ಷೆ ಮಂಜೂರು ಮಾಡಿದ್ದಾರೆ. ಖಾತಾ ಸಹ ಮಾಡಿಕೊಟ್ಟಿದ್ದಾರೆ ಎಂಬ ಆರೋಪಗಳಿವೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]

ಜುಲೈ ತಿಂಗಳ ಅಂತ್ಯದಲ್ಲಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಭಾರೀ ಅನಾಹುತ ನಡೆದಿತ್ತು. ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿದ್ದ ಸಿದ್ದರಾಮಯ್ಯ ಅವರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಜೊತೆಗೆ ಅಕ್ರಮ ನಿರ್ಮಾಣಗಳಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿದ್ದರು.

Comments

Leave a Comment

Prev Post Residents oppose tree park in Turahalli forest
Next Post ವೇಣುಗೋಪಾಲ್ ಪರಿಸರ ಪರಿಸರವಾದಿಗಳು ಕರ್ನಾಟಕ
17 ಕಲುಷಿತ ನದಿಗಳನ್ನು ಸ್ವಚ್ಛಗೊಳಿಸಲು ಕ್ರಿಯಾ ಯೋಜನೆ

17 ಕಲುಷಿತ ನದಿಗಳನ್ನು ಸ್ವಚ್ಛಗೊಳಿಸಲು ಕ್ರಿಯಾ ಯೋಜನೆ

17 ಕಲುಷಿತ ನದಿಗಳನ್ನು ಸ್ವಚ್ಛಗೊಳಿಸಲು ಕ್ರಿಯಾ ಯೋಜನೆ

ಕೆರೆ ಸಮೀಪದ 6 ಕಾರ್ಖಾನೆ ಮುಚ್ಚಲು ಸಿದ್ಧತೆ

ಕೆರೆ ಸಮೀಪದ 6 ಕಾರ್ಖಾನೆ ಮುಚ್ಚಲು ಸಿದ್ಧತೆ

ಕೆರೆ ಸಮೀಪದ 6 ಕಾರ್ಖಾನೆ ಮುಚ್ಚಲು ಸಿದ್ಧತೆ

Soil pollution can lead to a major catastrophe

Soil pollution can lead to a major catastrophe

Soil pollution can lead to a major catastrophe

ಪಾತ್ರೆ ಮೊಗಚುವ ದಿನ!

ಪಾತ್ರೆ ಮೊಗಚುವ ದಿನ!

ಪಾತ್ರೆ ಮೊಗಚುವ ದಿನ!

Breakthrough in Plastic Technology: Degradation and Soil Enrichment.

Breakthrough in Plastic Technology: Degradation and Soil Enrichment.

Breakthrough in Plastic Technology: Degradation and Soil Enrichment.

ಕಬ್ಬನ್ ಪಾರ್ಕ್ ಬಾಲಭವನದಲ್ಲಿ ಮಕ್ಕಳಿಗೆ ಚಿತ್ರ ಸ್ಪರ್ಧೆ ಹಾಗೂ ಸಸಿ ವಿತರಣಾ ಕಾರ್ಯಕ್ರಮ

ಕಬ್ಬನ್ ಪಾರ್ಕ್ ಬಾಲಭವನದಲ್ಲಿ ಮಕ್ಕಳಿಗೆ ಚಿತ್ರ ಸ್ಪರ್ಧೆ ಹಾಗೂ ಸಸಿ ವಿತರಣಾ ಕಾರ್ಯಕ್ರಮ

ಕಬ್ಬನ್ ಪಾರ್ಕ್ ಬಾಲಭವನದಲ್ಲಿ ಮಕ್ಕಳಿಗೆ ಚಿತ್ರ ಸ್ಪರ್ಧೆ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Read all News